Kannada NewsKarnataka NewsLatestPolitics

*ಕಾರು-ಬೈಕ್ ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಂದ್ರೇಗೌಡ (52), ಹೇಮಲತಾ (45) ಮೃತ ದಂಪತಿ.

ಮದುವೆ ಸಮಾರಂಭಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button