Kannada NewsKarnataka NewsLatest

*ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಹಾಡಹಗಲೇ ನಡು ರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ನಡೆದಿದೆ.

ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಶೇಕ್ ಮುಜೀಬ್ ಎಂಬಾತ ಪತ್ನಿ ನೈಗರ್ ಮೇಲೆ ನಡು ರಸ್ತೆಯಲ್ಲಿ ಮನಬಂದಂತೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

Home add -Advt

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

ಆರೋಪಿ ಪತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪತ್ನಿ ಮೇಲಿನ ಅನುಮಾನದಿಂದ ಹಲ್ಲೆ ನಡೆಸಿದ್ದಾಗಿ ಪತಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Related Articles

Back to top button