
ಪ್ರಗತಿವಾಹಿನಿ ಸುದ್ದಿ: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ನಡೆದಿದೆ.
ವಿವಾಹ ಸಮಾರಂಭ ಮುಗಿಸಿ ವಾಪಾಸ್ ಆಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.