Kannada NewsKarnataka NewsLatestPolitics

*ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ.ಸೋಮಶೇಖರ್*

ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ


ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಮತದಾನಕ್ಕೂ ಮುನ್ನ ಮಾತನಾಡಿದ್ದ ಸೋಮಶೇಖರ್ ಯಾರು ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದ್ದಾರೆ. ಅನುದಾನ ನೀಡುವುದಾಗಿ ಗಟ್ಟಿ ಭರವಸೆ ಕೊಡುತ್ತಾರೆ ಅವರಿಗೆ ಮತ ಹಾಕುವುದಾಗಿ ತಿಳಿಸಿದ್ದರು. ಇದೀಗ ಕಾಂಗ್ರೆಸ್ ಗೆ ಮತ ಚಲಾಯಿಸುವ ಮೂಲಕ ಅಡ್ಡಮತದಾನ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button