ಪ್ರತಿಭಟನೆ ತಡೆಯಲು ಮುಂದಾದಾಗ ನೂಕು ನುಗ್ಗಲು
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕ್ರತರನ್ನು ತಡೆಯಲು ಮುಂದಾದ ವೇಳೆ ನೂಕು, ನುಗ್ಗಲು ಉಂಟಾಗಿದ್ದು ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ.
ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ತುಮಕೂರು ಡಿವೈಎಸ್ ಪಿ ಚಂದ್ರಶೇಖರ್ ಅವರ ಮೇಲೆ ಬಿಜೆಪಿ ಕಾರಕರ್ತರು ಹಲ್ಲೆ ನಡೆಸಿದ್ದಾರೆ. ಡಿವೈ ಎಸ್ ಪಿ ಮೂಗಿನ ಮೇಲೆ ರಕ್ತ ಬರುವಂತೆ ಗಾಯಗಳಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ