ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಸುಮಾರು 90 ಲಕ್ಷ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸಾಯಿಶೋರ್ ರಾಗಿ ಹೆಲ್ತ್ ಮಿಕ್ಸ್ ಮಾರ್ಟ್ ನ್ನು ಉಚಿತವಾಗಿ ನೀಡುತ್ತಿರುವ ಮುದ್ದೆಗಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟಿಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಬಿಸಿಯೂಟ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು, ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಭಿನಂಧಿಸಿ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನ ಸಂಸ್ಥಾಪಕರಾದ ಸದ್ಗುರು ಶ್ರೀ. ಮಧುಸೂದನ್ ಸಾಯಿ ಅವರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.
ಮುಧುಸೂದನ್ ಸಾಯಿ ಅವರ ಪರವಾಗಿ ಶ್ರೀ ಸತ್ಯಸಾಯಿ ಮಾನವ ಅಭ್ಯೂಧ್ಯ ವಿಶ್ವವಿದ್ಯಾಲಯದ ಕುಲಪತಿಗಳದ ಶ್ರೀ ಬಿ.ಎನ್. ನರಸಿಂಹ ಮೂರ್ತಿ ಅವರು ಗೌರವವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ, ಸತ್ಯಸಾಯಿ ಟ್ರಸ್ಟ್ ದೇಶ ವಿದೇಶಗಳಲ್ಲಿ ಅದ್ಬುತವಾದ ಕಾರ್ಯ ಮಾಡಿದೆ. 2023 ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂಸ್ಥೆಗೆ ಭೇಟಿ ನೀಡಿ ಉಚಿತ ಆರೋಗ್ಯ ಆಸ್ಪತ್ರೆಯನ್ನು ಉದ್ಘಾಟಿಸಿರುವುದನ್ನು ಸ್ಮರಿಸಿದರು. ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ತಮ್ಮ ಮಠದಿಂದಲೂ ಅದ್ಬುತ ಕಾರ್ಯ ಮಾಡುತ್ತಿದ್ದಾರೆ. ಇಡೀ ಕರ್ನಾಟಕದ 53 ಎನ್ ಜಿಒಗಳನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಎಂದರು.
ಈ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಸಮೂಹ ಸಂಸ್ಥೆಗಳ ಸಂಪರ್ಕಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಕಾರ್ಯದರ್ಶಿ ಆನಂದ ಕಡಲಿ, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಟ್ರಸ್ಟಿ ಸಾಯಿಪ್ರಸಾದ ಯುವನೂರಿ, ಉಪಸ್ಥಿತರಿದ್ದರು.
ಕೆಎಸ್ಎಂಎಫ್ ನ ಕಾರ್ಯದರ್ಶಿ ಡಾ. ಕೆ.ಭೀಮಾ ಸ್ವಾಗತಿಸಿದರು. ಕೆಎಸ್ಎಂಎಫ್ ನ ಉಪಾಧ್ಯಕ್ಷ ಅಪ್ಪಾಜಿ ಗೌಡರು ಹಾಗೂ ಕೆಎಸ್ಎಂಎಫ್ ನ ನಿರ್ದೇಶಕ ರವೀಂದ್ರ ಕುಮಾರ, ಶ್ರೀಧರ್ ಶೆಟ್ಟರ್, ಪ್ರವೀಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಸರ್ವರಿಗೂ ಸನ್ಮಾನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ