Kannada NewsKarnataka NewsLatest

*ಹೋಟೆಲ್ ನಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ; ಬೆಚ್ಚಿಬಿದ್ದ ಬೆಂಗಳೂರಿಗರು*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಹೋಟೆಲ್ ಒಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇದ್ದಕ್ಕಿದ್ದಂತೆ ನುಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮೊದಲಿಗೆ ಸಿಲಿಂಡರ್ ಸ್ಫೋಟವಿರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಸಿಲಿಂಡರ್ ಸ್ಫೋಟವಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಕೈ ತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹಲವರ ಕಿವಿಯಲ್ಲಿ ರಕ್ತ ಬಂದಿದೆ. ಘಟನಾ ಸ್ಥಳದಲ್ಲಿ ಸಿಲಿಂಡರ್ ಆಗಲಿ, ಬಾಯ್ಲರ್ ಆಗಲಿ ಇರಲಿಲ್ಲ ಎನ್ನಲಾಗಿದೆ. ಹೋಟೆಲ್ ನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವಾದರೂ ಏನಿರಬಹುದು? ಎಂಬುದು ಸದ್ಯದ ಪ್ರಶ್ನೆ.


Related Articles

Back to top button