*ಶ್ರೀ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಯ ಶಂಕುಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಿಲ್ಲಾಡಳಿತ ಮತ್ತು ಪ್ರವಾಸೋಧ್ಯಮ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಕೇಂದ್ರ ಪುರಸ್ಕೃತ ಪ್ರಸಾದ ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭವು ಮಾ.೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಬೆಳಗಾವಿ ಜಿಲ್ಲೆಯ ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮ ಗುಡ್ಡದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಮುಖಾಂತರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಜಿ.ಕಿಶನ್ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ ಅವರು ಭಾಗವಹಿಸುವರು. ವಿಧಾನ ಸಭೆ ಶಾಸಕರಾದ ವಿಶ್ವಾಸ ವೈದ್ಯ ಅವರು ಅಧ್ಯಕ್ಷತೆ ವಹಿಸುವರು.
ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿಯ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರು ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಜಿಲ್ಲಾ ಅಧಿಕಾರಿ ನಿತೇಶ್ ಪಾಟೀ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತ ಇರಲ್ಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ