Kannada NewsKarnataka NewsLatest
*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತನನ್ನು ವಶಕ್ಕೆ ಪಡೆದ ಎನ್ ಐಎ*

ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೋರ್ವನನ್ನು ಎನ್ ಐಎ ವಶಕ್ಕೆ ಪಡೆದಿದೆ.
ಬಳ್ಳಾರಿ ಜೈಲಿನಲ್ಲಿದ್ದ ಮಿಯಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಈತ ಸಂಚು ರೂಪಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸುಲೇಮಾನ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬಾಂಬರ್ ಗಾಗಿ ಹುಡುಕಾಟ ತೀವ್ರಗೊಂಡಿದೆ.



