ಯೋಜನೆಗಳು ರದ್ದು: ಯಡಿಯೂರಪ್ಪ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು-
ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿರುವುದರಿಂದ ರಾಜ್ಯ ಸರಕಾರ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಕೇಂದ್ರ ಸರಕಾರವೂ ನೆರವು ನೀಡಲು ಹಿಂದೆ ಮುಂದೆ ನೋಡುತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ನೆರವಿಗಾಗಿ ಸಾರ್ವಜನಿಕರ, ಉದ್ಯಮಿಗಳ ಮೊರೆ ಹೋಗಿದ್ದಾರೆ.
ಇದರ ಜೊತೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಕೆಲವು ಯೋಜನೆಗಳನ್ನು ಕಡಿತ ಮಾಡುವ ಮೂಲಕ ಮುಖ್ಯಮಂತ್ರಿಗಳು ಹಣ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ ಎನ್ನುವ ವದಂತಿಯೂ ಹಬ್ಬಿತ್ತು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿಯ ಬದಲು 2 ಕೆಜಿ ಕಡಿತ ಮಾಡಲಾಗುತ್ತದೆ ಎಂದೂ ಹೇಳಲಾಗಿತ್ತು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ನಾವು ಜಾರಿಗೊಳಿಸಿದ್ದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡಿದರೆ ಸುಮ್ಮಿರುವುದಿಲ್ಲ. ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದೂ ಸಿದ್ದರಾಮಯ್ಯ ಎಚ್ಚರಿಸಿದ್ದರು.
ಜನಪ್ರಿಯ ಯೋಜನೆ ರದ್ದು ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
ಈಗ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ