Kannada NewsKarnataka NewsLatestPolitics
*4-5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳಿಗೂ ಬಿಜೆಪಿ ಟಿಕೆಟ್ ಫೈನಲ್*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ರಾಜ್ಯದ ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಮಜಿ ಸಿಎಂ ಬೊಮ್ಮಾಯಿ, ನಾಳೆ ಅಥವಾ ನಾಡಿದ್ದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
4-5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳ ಟಿಕೆಟ್ ಫೈನಲ್ ಆಗಿದೆ. ಮೈತ್ರಿ ಪಕ್ಷಕ್ಕೆ ಕ್ಷೇತ್ರ ಹಂಚಿಕೆ ಬಗ್ಗೆ ವರಿಷ್ಠರೇ ತೀರ್ಮನ ಮಾಡ್ತಾರೆ. ರಾಜಕಾರಣದಲ್ಲಿ ಯಾವುದೂ ಕಷ್ಟವಿಲ್ಲ. ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ವಿರೋಧಿಗಳ ರಣನೀತಿ ಮೇಲೆ ನಾವು ಕೆಲ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ