Kannada NewsKarnataka NewsLatest

*ಬಾಡಿಗೆ ಮನೆಯಲ್ಲಿಯೇ ಶವವಾಗಿ ಪತ್ತೆಯಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಮನೆಯೊಂದರಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದು, ಪತ್ನಿಯನ್ನು ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಹಾಸನ ನಗರದ ಕೆ.ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದೆ. ಹೊಳೆನರಸಿಪುರದ ದೇವರಾಜು (43), ಮಂಜುಳಾ (36) ಮೃತ ದಂಪತಿ.

Home add -Advt

ಕೆ.ಹೊಸಕೊಪ್ಪಲಿನಲ್ಲಿ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ದುರ್ವಾಸನೆ ಬರುತ್ತಿರುವುದರಿಂದ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಮನೆ ಬೀಗ ಒಡೆದು ಒಳೆಗೆ ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ.

ಪತಿ ದೇವರಾಜು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಪತ್ನಿ ಮಂಜುಳಾ ಮಂಚದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button