ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧಾರ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಅಭಿಮಾನಿಗಳ ಸಭೆ ನಡೆಸಿದ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಸೇಡು ತೀರಿಸಿಕೊಳ್ಳಲು ಅವರು ಮುಂದಾಗಿದ್ದಾರೆ.
ತಮ್ಮ ಪುತ್ರನಿಗೆ ಟಿಕೆಟ್ ತಪ್ಪಲು ಯಡಿಯೂರಪ್ಪ ಅವರೇ ಕಾರಣ ಎನ್ನುವುದು ಈಶ್ವರಪ್ಪ ನೇರ ಆರೋಪ.
ಸ್ವತಂತ್ರವಾಗಿ ಗೆದ್ದು ಬಂದು ನರೇಂದ್ರ ಮೋದಿಯವರನ್ನು ಬೆಂಬಲಿಸುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ