*ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತೇನೆ; ಮಾಜಿ ಸಚಿವ ಈಶ್ವರಪ್ಪ ಘೋಷಣೆ*
ಮಾಜಿ ಸಿಎಂ ಯಡಿಯುರಪ್ಪ ವಿರುದ್ಧ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿ: ಹಾವೇರಿ ಲೋಕಸಭಾ ಬಿಜೆಪಿ ಟಿಕೆಟ್ ಪುತ್ರ ಕಾಂತೇಶ್ ಗೆ ಕೈತಪ್ಪಿದ್ದರಿಂದ ತೀವ್ರ ಬೇಸರಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾಂತೇಶ್ ಗೆ ಟಿಕೆಟ್ ಕೈತಪ್ಪಲು ಯಡಿಯೂರಪ್ಪ ಹಾಗೂ ಅವರ ಮಕ್ಕಳೇ ಕಾರಣ. ಪಕ್ಷ ತಂದೆ-ಮಕ್ಕಳ ಕೈಗೆ ಸಿಲುಕಿ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಬಿಎಸ್ ವೈ ಹಾಗೂ ಮಕ್ಕಳ ಕಪಿಮುಷ್ಠಿಯಲ್ಲಿ ಬಿಜೆಪಿ ಸಿಲುಕಿಕೊಂಡಿದೆ. ಪಕ್ಷವನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.
ಪಕ್ಷ ಉಳಿಸುವ ನಿಟ್ಟಿನಲ್ಲಿ ನನ್ನ ಹೋರಾಟ. ಹಾಗಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾರೆ.
ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವುದು ಖಚಿತ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಬಿಜೆಪಿ ಹಿತದೃಷ್ಟಿಯಿಂದ ಹಾಗೂ ಅಪ್ಪ-ಮಕ್ಕಳ ಕೈಯಿಂದ ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿದ್ದೇನೆ. ಇದರಲ್ಲಿ ಯಾವ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ