ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆ: ಪಡಿತರ ವಿತರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಮಾರ್ಚ-೨೦೨೪ ಮಾಹೆಯಲ್ಲಿ ಪಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ವಿತರಣೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ೬೮,೦೬೭ ಅಂತ್ಯೋದಯ, ೧೦,೬೮,೪೫೧ ಬಿಪಿಎಲ್ ಹಾಗೂ ೩,೨೩,೦೫೨ ಎಪಿಎಲ್ ಪಡಿತರ ಚೀಟಿಗಳು ಸೇರಿ ಒಟ್ಟು ೧೪,೫೯,೫೭೦ ಪಡಿತರ ಚೀಟಿಗಳು ಚಾಲ್ತಿಯಲ್ಲಿರುತ್ತವೆ. ಈ ಮಾಹೆ ೧ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೇ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.
ಅಂತ್ಯೋದಯ (ಎಎವೈ) ಪ್ರತಿ ಪಡಿತರ ಚೀಟಿಗೆ ಉಚಿತವಾಗಿ ೩೫ ಕೆ.ಜಿ ಅಕ್ಕಿ, ಪಿ.ಎಚ್.ಎಚ್ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಉಚಿತವಾಗಿ ೦೫ ಕೆ.ಜಿ ಅಕ್ಕಿ, ಎನ್ ಪಿಹೆಚ್ (ಎಪಿಎಲ್) (ಆದ್ಯತೇತರ) (ಒಪ್ಪಿತ ಪಡಿತರ ಚೀಟಿ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ ಪ್ರತಿ ಕಿ.ಜಿ.ಗೆ ರೂ.೧೫, ಎರೆಡು ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ , ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಪ್ರತಿ ಸದಸ್ಯೆರಿಗೆ ರೂ.೧೭೦ ಡಿ.ಬಿ.ಟಿ ಮೂಲಕ ಹಣ ಜಮೆ, (Portability) ಅಂತರ್ರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದ ಪಡಿತರ ವಿತರಣಾ ಪ್ರಮಾಣ (೫ ಕೆ.ಜಿ. ಪ್ರತಿ ಸದಸ್ಯರಿಗೆ) ದರ (ಪ್ರತಿ ಕೆ.ಜಿ ಗೆ ರೂ.೩ ರಂತೆ) ಅನ್ವಯಿಸುತ್ತದೆ.
ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರ ಅಂತವರ ಪಡಿತರ ಚೀಟಿಯನ್ನು ರದ್ದುಪಡಿಸಲಾಗುತತ್ತದೆ. ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-೧೯೫೫ ರಡಿ ಕ್ರಮ ಜರುಗಿಸಲಾಗುವುದು.
ಫಲಾನುಭವಿಗಳು ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ ಕಚೇರಿಯ ಆಹಾರ ಶಾಖೆಯ ಅಥವಾ ಜಿಲ್ಲಾಧಿಕಾರಿ ಕಚೇರಿಯ ಜಂಟಿ ನಿರ್ದೇಶಕರ ಆಹಾರ ಕಚೇರಿ ಹಾಗೂ ಇಲಾಖೆಯ ೧೯೬೭ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಅಥವಾ ಫಲಾನುಭವಿಗಳು ನೇರವಾಗಿ https://ahara.kar.nic.in/status2/status_of_dbt.aspx
ಇಲಾಖೆಯ ವೆಬ್ ಸೈಟ್ ಮೂಲಕ ಮಾಹಿತಿ ಪಡೆಯಬಹುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ