Film & EntertainmentKannada NewsKarnataka NewsLatest

ಅಕ್ರಮವಾಗಿ ದತ್ತು ಪ್ರಕರಣ; ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅರೆಸ್ಟ್

ಇಂದು ಸ್ಥಳ ಮಹಜರು

Home add -Advt

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅವರನ್ನು ಬಧಿಸಲಾಗಿದೆ. ಪ್ರಕರಣ ಸಂಬಂಧ ಬಾಲಕಿಯ ಹುಟ್ಟೂರಾದ ರಾಯಚೂರಿಗೆ ಕರೆದೊಯ್ದು ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಮಹಜರು ಮಾಡಿದ್ದಾರೆ.

ರಾಯಚೂರಿನ ಬಾಲಕಿಯೊಬ್ಬಳನ್ನು ದತ್ತುಪಡೆದುಕೊಂಡಿರುವುದಾಗಿ ಸೋನು ಗೌಡ ಇತ್ತೀಚೆಗೆ ವಿಡಿಯೋ ಹಂಚಿಕೊಂಡಿದ್ದರು. ಆದರೆ ಸೋನು ಗೌಡ ನಿಯಮ ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಜಿಲ್ಲಾ ಮತ್ತು ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿ ದೂರು ನೀಡಿದ್ದರು.

ದೂರಿನ ಮೇರೆಗೆ ಸೌನುಗೌಡ ಅವರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಇಂದು ಮಗುವಿನ ಊರಾದ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗ್ರಾಮಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.


Related Articles

Back to top button