Kannada NewsKarnataka NewsLatest

*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಮೂಲದ ಇಬ್ಬರನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರೂ ಬಾಂಬರ್ ಗಳ ಜೊತೆ ನೇರ ಸಂಪರ್ಕದಲ್ಲಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಬಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು. ಬಾಂಬರ್ ಚಲನವಲನಗಳ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದಾಗ್ಯೂ ಈವರೆಗೆ ಬಂಬರ್ ನ ನಿಖರ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಎನ್ ಐ ಎ ಹಾಗೂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button