Kannada NewsKarnataka NewsLatest

*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇನ್ನಿಬ್ಬರು ಶಂಕಿತರು NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ.

ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐಎ ಬುಧವಾರ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇಂದು ಕೂಡ ಎನ್ ಐಎ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ಈ ನಡುವೆ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

Home add -Advt

ವಶಕ್ಕೆ ಪಡೆದಿರುವ ಇಬ್ಬರೂ ನಿಷೇಧಿತ ‘ಅಲ್ ಹಿಂದ್ ಟ್ರಸ್ಟ್’ ಜೊತೆ ನಂತು ಹೊಂದಿದ್ದರು. ವಶಕ್ಕೆ ಪಡೆದಿರುವ ಇಬ್ಬರೂ ಬಾಂಬರ್ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.

Related Articles

Back to top button