Kannada NewsKarnataka NewsLatestPolitics
*ಪ್ರಿಯಾಂಕ್ ಖರ್ಗೆಗೆ ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆ ರೂಪಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಿಯಾಂಕ್ ಖರ್ಗೆ ತನಗೆ ಜೀವಬೆದರಿಕೆ ಪತ್ರ ಬಂದಿದೆ. ಅದರಲ್ಲಿ ತನ್ನನ್ನು ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬೆದರಿಕೆ ಪತ್ರ ಪಿನ್ ಲ್ಯಾಂಡ್ ನಿಂದ ಬಂದಿದೆ ಎಂದು ಬೆದರಿಕೆ ಪತ್ರ ಓದಿದ್ದಾರೆ.
ಖಾಕಿಯಾದರೂ, ಖಾದಿಯಾದರೂ ಯಾರಿಂದಲಾದರೂ ನಿನ್ನನ್ನು ಎನ್ ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ. ಬಿಜೆಪಿಯವರಿಗೆ ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವೈಯಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.




