Election NewsKannada NewsKarnataka News
ಏಕಾಏಕಿ ಆಸ್ಪತ್ರೆಗೆ ದಾಖಲಾದ ನಟ ಶಿವರಾಜಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರ ಪತ್ನಿ ಗೀತಾ ಶಿವರಾಜ್ ಕುಮಾರ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ ಅವರು, ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಸಾಧ್ಯತೆ ಇದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗುವ ಸಾಧ್ಯತೆ ಇದೆ.




