Kannada NewsLatestNationalPolitics

*ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Home add -Advt

ನಾಮಪತ್ರ ಸಲ್ಲಿಕೆಗೂ ಮುನ್ನ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ರಾಹುಲ್ ಗಾಂಧಿಗೆ ಸಹೋದರಿ ಪ್ರಿಯಾಂಕಾ ಗಾಂಧಿ ಸಾಥ್ ನೀಡಿದರು.

ಬಳಿಕ ವಯನಾಡ್ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಮೂಲಕ ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


Related Articles

Back to top button