Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಭೀಕರ ಅಪಘಾತ; ರೈತ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿಯ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.

Home add -Advt

ಗೂಡ್ಸ್ ವಾಹನ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕರ್ ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ತವಾಡಗಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್ (41) ಮೃತ ದುರ್ದೈವಿ.

ಬೆಳಗಾವಿ ಮಾರ್ಕೆಟ್ ಗೆ ಕೊತ್ತಂಬರಿ ಸೊಪ್ಪನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಕೊಂಡು ಸಾಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗೂಡ್ಸ್ ವಾಹನ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಭಸಕ್ಕೆ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Related Articles

Back to top button