ಪ್ರಗತಿವಾಹಿನಿ ಸುದ್ದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿಗೂ ಅಧಿಕ ಹಣ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಿನ್ನೆ ರಾತ್ರಿ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ನಡೆದಿದೆ.
8 ಬ್ಯಾಗ್‌ಗಳಲ್ಲಿ ಹಣ ತುಂಬಿಕೊಂಡು ಎಗೋರ್‌ನಲ್ಲಿ ರೈಲಿನಲ್ಲಿ ಸಾಗಿಸಲಾಗುತ್ತಿತ್ತು, ಹಣ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು ಮತ್ತು ಫೈಯಿಂಗ್ ಸ್ಕ್ಯಾಡ್ ತಂಡ
ತಾಂಬರಂ ರೈಲು ನಿಲ್ದಾಣಕ್ಕೆ ಧಾವಿಸಿ, ಹುಡುಕಾಟ ನಡೆಸಿದಾಗ ಹಣ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಭದಿಸಿದಂತೆ ಮೂವರೂ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸ್ ಸತೀಶ್ (33), ಆತನ ಸಹೋದರ ಎಸ್ ನವೀನ್ (31) ಮತ್ತು ಎಸ್ ಪೆರುಮಾಳ್ (26) ಎಂದು ಗುರುತಿಸಲಾಗಿದೆ.
ಪೊಲೀಸರು ಮೂವರು ಶಂಕಿತರನ್ನು ಬಂಧಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಐಟಿ ತಂಡಗಳು ಆರೋಪಿಗಳನ್ನು ಇಂದು ಅಥವಾ ನಾಳೆ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ