ಪ್ರಗತಿವಾಹಿನಿ ಸುದ್ದಿ: ದಾಖಲೆಗಳಿಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಕೋಟಿ 50 ಲಕ್ಷ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿರುವ ಘಟನೆ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಾರನ್ನು ಪರಿಶೀಲನೆ ನಡೆಸಿದಾಗ ಬರೋಬ್ಬರಿ 5 ಕೋಟಿ 50 ಲಕ್ಷ ನಗದು ಹಣ ಪತ್ತೆಯಾಗಿದೆ.
ನಗದು ಹಣ ಹಾಗೂ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನದೆಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಈ ಹಣ ಸಾಗಿಸಲಾಗುತ್ತಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ