Belagavi NewsBelgaum NewsKannada NewsKarnataka NewsLatest

*ಸುಟ್ಟು ಕರಕಲಾದ ಬೆಳಗಾವಿ ಕಡೆಯಿಂದ ಹೊರಟಿದ್ದ ಕಾರು*

ಪ್ರಗತಿವಾಹಿನಿ ಸುದ್ದಿ: ದಾಂಡೇಲಿ ತಾಲೂಕಿನ ನಾನಾಕೆಸರೋಡ್ ಗೆ ಬೆಳಗಾವಿ ಕಡೆಯಿಂದ ಹೊರಟಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಳಗಾವಿಯಿಂದ ದಾಂಡೇಲಿಗೆ ಹೊರಟ್ಟಿದ ಕಾರು ಸುಟ್ಟು ಕರಕಾಲಾಗಿದೆ. ಈ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಡಲೇ ಕಾರು ನಿಲ್ಲಿಸಿ ಹೊರಗಿಳಿದಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿದಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. 

Home add -Advt

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಅತಿಯಾದ ತಾಪಮಾನದಿಂದ ಇಂಜೀನ್ ಹೀಟ್ ಆಗಿ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.‌ ಈ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗಿದೆ.

Related Articles

Back to top button