ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಮೇಲೆ ಚುನಾವಣಾ ಆಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಮನಗರದ ಬಿಡದಿ ಬಳಿಯ ತೋಟದ ಮನೆಯಲ್ಲಿ ನಡೆದಿದೆ.
ಕುಮಾರಸ್ವಾಮಿ ಅವರ ಕೇತಗಾನಹಳ್ಳಿ ತೋಟದ ಮನೆ ಮೆಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಇಂದು ಭೂಜನ ಕೂಟ ಆಯೋಜನೆ ಮಾಡಲಾಗಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಊತದ ವ್ಯವಸ್ಥೆ ಮಾಡಲಾಗಿದ್ದು, ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಇದೇ ವೇಳೆ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿ ಕುಮರಸ್ವಾಮಿ ಸ್ಪರ್ಧಿಸಿದ್ದು, ಚುನಾವಣೆ ಹೊತ್ತಲ್ಲಿ ತೋತದ ಮನೆಯಲ್ಲಿ ಭೋಜನ ಕೂಟ ಆಯೋಜನೆ ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ ಮತದಾರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಹೆಚ್.ಡಿ.ಕೆ ತೋಟದ ಮನೆಯಿಂದ ಬಾಡೂಟ, ಮದ್ಯದ ವಾಸನೆ ಹೊರ ಬರುತ್ತಿದೆ ಎಂದು ಕಾಂಗ್ರೆಸ್ ಕೂಡ ಆರೋಪಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ರೇಡ್ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ