Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಕೆಲ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಲಿದೆ ಎಂದು ಸೂಚನೆ ನೀಡಿದೆ.

Home add -Advt

ಒಂದೆಡೆ ಬರಗಾಲ, ಇನ್ನೊಂದೆಡೆ ನೀರಿನ ಸಮಸ್ಯೆ ಈ ನಡುವೆ ರಣಬಿಸಿಲಿನಿಂದಾಗಿ ಬಿಸಿ ಗಾಳಿ ಬೀಸುತ್ತಿದೆ. ಮುಂದಿನ ಎರಡು ದಿನಗಳಲ್ಲಿ ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಇನ್ನಷ್ಟು ಉಷ್ಣಾಂಶ ಹೆಚ್ಚಲಿದೆ ಎಂದು ತಿಳಿಸಿದೆ.

ಇನ್ನು ಕೊಪ್ಪಳ, ಬಾಗಲಕೋಟೆ,ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Related Articles

Back to top button