ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಗಿದೆ. ರಾಜ್ಯದ್ಯಂತ ಹೆಚ್.ಕೆ.ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಬೆಳವಣಿಗಳ ಬೆನ್ನಲ್ಲೇ ಎಚ್ಚೆತ್ತ ಹೆಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಹೆಣ್ಣು ಮಕ್ಕಳನ್ನು ಅವಮಾನ ಮಾಡುವ ಉದ್ದೇಶದಿಂದ ಹೇಳಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಮಾರು ಹೋಗಿ ದಾರಿತಪ್ಪಬೇಡಿ ಎಂದು ಹೇಳಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೆನೆ ಎಂದಿದ್ದಾರೆ.
ಇದೇ ವೇಳೆ ನಾನು ಕೂಡ ದಾರಿತಪ್ಪಿದ್ದೆ. ಅದನ್ನು ಈ ಹಿಂದೆಯೇ ಹೇಳಿದ್ದೇನೆ. ವಿಧಾನಸೌಧದ ಕಲಾಪದಲ್ಲಿಯೇ ನಾನು ಹೇಳಿದ್ದೇನೆ. ನನ್ನ ಪತ್ನಿ ನನ್ನ ತಿದ್ದಿದ್ದಾಳೆ. ಯಾವುದೇ ಹೆಣ್ಣುಮಕ್ಕಳನ್ನು ಅವಮಾನ ಮಾಡಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತೇನೆ. ಕಾಂಗ್ರೆಸ್ ನವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನೋಟಿಸ್ ಬಂದರೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ