Kannada NewsKarnataka NewsNational

*ಹುಬ್ಬಳಿ ಬಳಿ ಭೀಕರ ಅಪಘಾತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.‌

Home add -Advt

ಹುಬ್ಬಳಿ ಬಳಿಯ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿಯಲ್ಲಿ ಒಬ್ಬ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಮದ್ಯದ ಬಾಟಲಿಗಳು ಕಂಡು ಬಂದಿದ್ದು, ಕುಡಿದು ಕಾರು ಚಲಾಯಿಸುತ್ತಿದ್ದರಾ? ಎಂಬ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿದ್ದ ನಾಲ್ವರು ಆಂಧ್ರದ ಕರ್ನೂಲು ಜಿಲ್ಲೆಯವರು ಎನ್ನಲಾಗಿದ್ದು, ಅಪಘಾತದಲ್ಲಿ ಮೃತಪಟ್ಟಿರುವವರ ಪೈಕಿ ಓರ್ವನನ್ನು ಹೈದರಾಬಾದ್‌ನ ಉಪ್ಪಳ ನಿವಾಸಿ ಸೀತಾರಾಂ ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Related Articles

Back to top button