Kannada NewsLatest

*6ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: 6ನೇ ತರಗತಿ ವಿದ್ಯಾರ್ಥಿನಿಗೆ ನಿರಂತರವಾಗಿ ಶಿಕ್ಷಕ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದು, ಭಯಗೊಂಡಿರುವ ವಿದ್ಯಾರ್ಥಿನಿ ಶಾಲೆಗೆ ಹೋಗಲು ಹಿಂದೇಟು ಹಾಕಿದ್ದಾಳೆ.

ಶಿಕ್ಷಕ ವಿರಾಜ್ ಜೈನ್ ವಿರುದ್ಧ ವಿದ್ಯಾರ್ಥಿನಿ ಆರೋಪ ಮಾಡಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿನಿ ಏಕಾಏಕಿ ತಾನು ಶಾಲೆಗೆ ಹೋಗುವುದಿಲ್ಲ ಎಂದು ಅಳಲು ಶುರುಮಾಡಿದ್ದಾಳೆ. ಇದಕ್ಕೆ ಸಮಾದಾನ ಮಾಡಿ ಪೋಷಕರು ಮಗಳನ್ನು ವಿಚರಿಸಿದ್ದಾರೆ.

ಈ ವೇಳೆ ಬಾಲಕಿ, ತನಗೆ ಶಿಕ್ಷಕ ಕಳೆದ ಜೂನ್ ನಿಂದ ಈವರೆಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದಾಳೆ. ಶಿಕ್ಷಕನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ.

ಶಿಕ್ಷಕ ವಿರಾಜ್ ಜೈನ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿ ವಿಚಾರಣೆ ನದೆಸಿದ್ದಾರೆ.

Related Articles

Back to top button