Kannada NewsNational

ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರ್: 10 ಜನರ ಸಾವು 

ಪ್ರಗತಿವಾಹಿನಿ ಸುದ್ದಿ: ಗುಜರಾತ್‌ನ ಅಹಮದಾಬಾದ್ – ವಡೋದರ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಟ್ರಕ್ ನ ಹಿಂಬದಿಗೆ ಕಾರ್ ಗುದ್ದಿದ ಪರಿಣಾಮ ಮಗು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ವಡೋದರಾದಿಂದ ಅಹಮದಾಬಾದ್‌ಗೆ ಪ್ರಯಾಣಿಸುತ್ತಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿದ್ದವರೆಲ್ಲರೂ ಮೃತಪಟ್ಟಿದ್ದಾರೆ.  ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.

Home add -Advt

ಎಕ್ಸ್‌ಪ್ರೆಸ್‌ವೇನಲ್ಲಿ ಕೆಟ್ಟು ಎಡಭಾಗದಲ್ಲಿ ನಿಂತಿದ್ದ  ಟ್ರಕ್ ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. “ಗುಜರಾತನ ಖೇಡಾ ಜಿಲ್ಲೆಯ ನಾಡಿಯಾಡ್ ಬಳಿ ಸಂಭವಿಸಿದ ಅಪಘಾತದಲ್ಲಿ ಚಾಲಕ ಮತ್ತು ಐದು ವರ್ಷದ ಮಗು ಸೇರಿದಂತೆ ಕಾರಿನಲ್ಲಿದ್ದ  ಹತ್ತು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. 


Related Articles

Back to top button