ಪ್ರಗತಿವಾಹಿನಿ ಸುದ್ದಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಒಂದೆಡೆ ವಿದ್ಯಾರ್ಥಿ ಸಂಘಟನೆಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿವಿಬಿ ಕಾಲೇಜು ಆವರಣದಲ್ಲಿಯೇ ಕಾರ್ಪೊರೇಟರ್ ಪುತ್ರಿ ಎಂಬಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಫಯಾಜ್ ಎಂಬ ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಬೇಕು, ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಿವಿಬಿ ಕಾಲೇಜು ಬಳಿ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿವಿಬಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಇತರ ಕಾಲೇಜು ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಹುಬ್ಬಳ್ಳಿ-ಧರವಾಡ ರಸ್ತೆ ತಡೆ ನಡೆಸಿ, ಟೈಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ