ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ರಾಜ್ಯ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೆಚ್.ಡಿ.ಕೆ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆ ನೀಡಿದೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ‘ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ’ ಎಂಬ ಹೇಳಿಕೆ ನೀಡುವ ಮುಲಕ ವಿವಾದ ಸೃಷ್ಟಿಸಿದ್ದರು. ಹೆಚ್.ಡಿ.ಕೆ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರು.
ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡುವ ಮೂಲಕ ಚುನಾವಣೆ ಹೊತ್ತಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ