ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಇದೇ ವೇಳೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ