Film & EntertainmentKannada NewsKarnataka News

*ನಟಿ ಹರ್ಷಿಕಾ ಹಾಗೂ ಪತಿ ಭುವನ್ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲಿ ಹೋಗುತ್ತಿದ್ದ ವೇಳೆ ಕನ್ನಡದಲ್ಲಿ ಮಾತನಾಡಿದಕ್ಕೆ ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಮೇಲೆ ಹಲ್ಲೆ ಆಗಿರುವ ಘಟನೆ ನಡೆದಿದೆ.‌

ಬೆಂಗಳೂರಿನ ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಈ  ಘಟನೆ ನಡೆದಿದ್ದು , ಕಾರ್ ಪಾರ್ಕಿಂಗ್ ವಿಚಾರಕ್ಕೆ ಆರೋಪಿಗಳು ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಯತ್ನಿಸಿದ್ದಾರೆ.‌ ಜೊತೆಗೆ ‘ಕನ್ನಡದಲ್ಲಿ ಮಾತನಾಡಬೇಡಿ’ ಎಂದು ನಟಿ ಹರ್ಷಿಕಾ ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ.‌

ಘಟನೆಯ ವಿಡಿಯೋ ಚಿತ್ರೀಕರಿಸಿರುವ ನಟಿ ಹರ್ಷಿಕಾ ಪೂಣಚ್ಚ ಅವರು ಪೋಲಿಸ್ ಠಾಣೆಗೆ ದೂರು ಕೊಟ್ರು ಏನೂ ಪ್ರಯೋಜನವಾಗಿಲ್ಲ. ನಮ್ಮ ಬೆಂಗಳೂರಿನಲ್ಲಿ ಕನ್ನಡದಲ್ಲಿ ಮಾತನಾಡುವುದೇ ತಪ್ಪಾ..? ನಮ್ಮ ಬೆಂಗಳೂರಿನಲ್ಲಿ ನಾವೆಷ್ಟು ಸುರಕ್ಷಿತ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಈ ಘಟನೆನಿಂದಾಗಿ ತಾವು ಆಘಾತಗೊಂಡಿರುವುದಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಸಾಮಾಜೀಕ ಜಾಲತಾಣದಲ್ಲಿ ಬರೆದಿರುವ ನಟಿ ಹರ್ಷಿಕಾ ಪೂಣಚ್ಚ ಅವರು, ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಊಟ ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ಕಾರ್ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬಂದು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, “ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು” ಎಂದು ಹೇಳಿ ನನ್ನ ಪತಿಯನ್ನು ಹೊಡೆಯಲು ಸಹ ಪ್ರಯತ್ನಿಸಿದರು. 2-3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20-30 ಸದಸ್ಯರ ಗುಂಪು ಜಮಾಯಿಸಿ ಅದರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರ ಹಾಗೂ ಕಾರ್ ನಲ್ಲಿ ಇದ್ದ ಅನೇಕ ಅವಸ್ತುಗಳನ್ನು ಕಿತ್ತುಕೊಂಡರು. 

ಇವರು ಸ್ಥಳೀಯ ಕನ್ನಡ ಜನರು ಎಂದು ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ  ಮಾತನಾಡಿದಾಗ ನಮ್ಮನ್ನು ನಿಂದಿಸಿದ್ದಾರೆ.     ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಕನ್ನಡದಲ್ಲೇ ಮಾತನಾಡುತ್ತಿದ್ದರು. ನಾವು ಕೂಡಲೆ ಪೊಲೀಸರಿಗೆ ಕರೆ ಮಾಡಿದಾಗ ಅವರು ಕೂಡಲೆ ಸ್ಥಳದಿಂದ ಹೊಗಿದ್ದಾರೆ.‌

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು.  ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಟಿ ಹರ್ಷಿಕಾ ಪೂಣಚ್ಚ ಹೆಳಿದ್ದಾರೆ.‌ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button