Kannada NewsKarnataka News

*ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಕಾರ್ಖಾನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಥಿನ್ನರ್ ತಯಾರಿಕಾ ಘಟಕದಲ್ಲಿ ಬೆಂಕಿ ಸಂಭವಿಸಿದ್ದು, ಥಿನ್ನರ್ ಕ್ಯಾನ್ ಗಳು ಸ್ಫೋಟಗೊಂಡಿವೆ.

Home add -Advt

ಮಾ ಟ್ರೆಡರ್ಸ್ ಎಂಬ ಥಿನ್ನರ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆಗೆ ಇಡೀ ಫ್ಯಾಕ್ಟರಿ ಧಗಧಗನೆ ಹೊತ್ತಿ ಉರಿದಿದೆ. ಥಿನ್ನರ್ ಕ್ಯಾನ್ ಗಳು ಸ್ಫೋಟಗೊಳ್ಳುತ್ತಿದ್ದು, ಅಕ್ಕಪಕ್ಕದ ಕಾರ್ಖಾನೆಗಳುಗೂ ಬೆಂಕಿ ವ್ಯಾಪಿಸುವ ಸಾಧ್ಯತೆ ಇದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಭಾನುವಾರವಾದ್ದರಿಂದ ಕಾರ್ಮಿಕರು ಬಂದಿರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

Related Articles

Back to top button