ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ
ಚುನಾವಣಾ ವೀಕ್ಷಕರಾದ ಜಿ.ಎಸ್.ಪಾಂಡಾ ದಾಸ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಅಂತಿಮವಾಗಿ ಕಣದಲ್ಲಿರುವ ಎಲ್ಲ ಅಭ್ಯರ್ಥಿಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ನಿಯೋಜಿತರಾದ ಜಿ.ಎಸ್.ಪಾಂಡಾ ದಾಸ್ ಅವರು ಅಭ್ಯರ್ಥಿಗಳಿಗೆ ತಿಳಿಸಿದರು.
ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಏ.೨೨) ರಂದು ಜರುಗಿದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಪ್ರಚಾರಕ್ಕೆ ಬಳಸಲಾಗುವ ವಾಹನಗಳ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ವಾಹನಗಳ ಪರವಾನಿಗೆ ಪಡೆಯಲು ಸುವಿಧಾ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಆಯೋಜಿಸಬಾರದು. ಒಟ್ಟಾರೆಯಾಗಿ ಅಭ್ಯರ್ಥಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರು, ಸಂದೇಹಗಳಿದ್ದರೆ ತಮ್ಮನ್ನು ಸಂಪರ್ಕಿಸಲು ವೀಕ್ಷಕರಾದ ಜಿ.ಎಸ್.ಪಾಂಡಾ ದಾಸ್ ಅವರು ತಿಳಿಸಿದರು.
ವೆಚ್ಚ ವೀಕ್ಷಕರಾದ ಎನ್. ಮೋಹನಕೃಷ್ಣ ಹಾಗೂ ಅಂಕಿತ ತಿವಾರಿ ಅವರುಗಳು ಮಾತನಾಡಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವದು ಮುಖ್ಯವಾಗಿದೆ. ಅಭ್ಯರ್ಥಿಗಳು ದೈನದಂದಿನವಾಗಿ ತಮ್ಮ ಚುನಾವಣಾ ಖರ್ಚು ವೆಚ್ಚಗಳನ್ನು ರಜಿಸ್ಟರನಲ್ಲಿ ದಾಖಲಿಸಬೇಕು. ಈ ಕುರಿತು ಅಭ್ಯರ್ಥಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದರು. ಅಭ್ಯರ್ಥಿಗಳು ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು. ಪ್ರಚಾರ ಸಭೆ, ಪ್ರಚಾರಕ್ಕಾಗಿ ಬಳಸಲಾಗುವ ವಾಹನಗಳ ಅನುಮತಿ ಪಡೆಯುವದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಮಾತನಾಡಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಕ್ಕೆ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಲಾಗಿರುತ್ತದೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಆದ್ಯತೇ ನೀಡಲಾಗುತ್ತಿದೆ. ಮತಗಟ್ಟೆಗಳ ಕುರಿತು ಅಭ್ಯರ್ಥಿಗಳಲ್ಲಿ ಸಂದೇಹಗಳಿದ್ದಲ್ಲಿ ಅಂತಹ ಮತಗಟ್ಟೆಗಳ ವಿವರಗಳನ್ನು ಒದಗಿಸಿದಲ್ಲಿ ಈ ಕುರಿತು ಪರಿಶೀಲಿಸಿ ಮುಂದಿನ ಅಗತ್ಯದ ಕ್ರಮ ಕೈಗೊಳ್ಳಲಾಗುವದು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳು ಉಪಸ್ಥಿತರಿದ್ದರು.ಲೋಕಸಭಾ ಚುನಾವಣೆ-೨೦೨೪
ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಖರ್ಚು-ವೆಚ್ಚ, ಲೆಕ್ಕಪತ್ರಗಳ ಮಾಹಿತಿ ಸಲ್ಲಿಸಲು ಸೂಚನೆ
02-ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 77 ರ ಪ್ರಕಾರ ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಜತೆಗೆ ಖರ್ಚು-ವೆಚ್ಚಗಳ ಲೆಕ್ಕ ಪುಸ್ತಕ, ಎಲ್ಲ ಮೂಲ ರಶೀದಿಗಳನ್ನು ಖುದ್ದಾಗಿ ಅಥವಾ ತಮ್ಮ ಚುನಾವಣಾ ಏಜೆಂಟ್ ಮೂಲಕ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು.
02-ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಈ ಕೆಳಕಂಡ ಮೂರು ದಿನಾಂಕಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ಅವಧಿಯಲ್ಲಿ ತಮ್ಮ ಲೆಕ್ಕಪತ್ರಗಳನ್ನು ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
• ಮೊದಲ ಪರಿಶೀಲನೆ- 26-4-2024
• ಎರಡನೇ ಪರಿಶೀಲನೆ-30-4-2024
• ಮೂರನೇ ಪರಿಶೀಲನೆ 04-05-2024
ಎಲ್ಲ ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮಾಹಿತಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಖರ್ಚು-ವೆಚ್ಚ, ಲೆಕ್ಕಪತ್ರಗಳ ಮಾಹಿತಿ ಸಲ್ಲಿಸಲು ಸೂಚನೆ
: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ತಿಳಿಸಿದ್ದಾರೆ.
೦೧-ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣಾಧಿಕಾರಿಗಳ ಕಾರ್ಯಾಲಯ, ಬಸವ ಸರ್ಕಲ್, ತಾಲೂಕು ಆಡಳಿತ ಸೌಧ, ಚಿಕ್ಕೋಡಿ ಇಲ್ಲಿ ಈ ಕೆಳಕಂಡ ಮೂರು ದಿನಾಂಕಗಳಂದು ಬೆಳಿಗ್ಗೆ ೧೧ ಗಂಟೆಗೆ ತಮ್ಮ ಲೆಕ್ಕಪತ್ರಗಳನ್ನು ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಮೊದಲ ಪರಿಶೀಲನೆ- ೨೬-೪-೨೦೨೪
ಎರಡನೇ ಪರಿಶೀಲನೆ-೩೦-೪-೨೦೨೪
ಮೂರನೇ ಪರಿಶೀಲನೆ ೦೪-೦೫-೨೦೨೪
ಎಲ್ಲ ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮಾಹಿತಿಯನ್ನು ಸಲ್ಲಿಸಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ