Kannada NewsKarnataka NewsLatest

*ರೈಲಿಗೆ ಸಿಲುಕಿ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ಮೃತರನ್ನು ಶಿವಕುಮಾರ್, ಲೋಕಿ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಮೂವರು 25 ವರ್ಷದ ಆಸುಪಾಸಿನವರಾಗಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಮೂಲದವರು ಎಂದು ತಿಳಿದುಬಂದಿದೆ.

ಮೃತ ಶಿವಕುಮಾರ್ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ. ಲೋಕಿ ಎಂಬಾತ ಕ್ಯಾಬ್ ಡ್ರೈವರ್ ಆಗಿದ್ದ. ಮೂವರು ರೈಲು ಹಳಿ ಕ್ರಾಸ್ ಮಾಡುವ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Related Articles

Back to top button