Election News

*ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ*

ನಾಳೆ ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾನ?

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಉತ್ಸುಕರಾಗಿದ್ದಾರೆ.

ನಾಳೆ ಕರ್ನಾಟಕದ ದಕ್ಷಿಣ ಭಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮೇ 7ರಂದು ಉತ್ತರ ಭಾಗದ 14 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯಲಿದೆ.

ರಾಜ್ಯದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಒಟ್ಟು 1,44,17,530 ಪುರುಷರು, 143,87,585 ಮಹಿಳೆಯರು ಹಾಗೂ 3067 ತೃತೀಯಲಿಂಗಿಗಳು ಸೇರಿದಂತೆ ಒಟ್ಟು 2,88,08182 ಮತದಾರರು ಹಕ್ಕು ಚಲಾಯಿಸಲಿದ್ದಾರೆ.

ಇನ್ನು ನಾಳೆ ಕರ್ನಾಟಕದ ಜೊತೆ ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಮತದಾನ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button