Election NewsKarnataka News

*ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ; ಮತಗಟ್ಟೆಗೆ ಮೊಬೈಲ್ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು 14 ಕೋಲಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Home add -Advt

ರಾಜ್ಯದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಈ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನಿಡಲಾಗಿದೆ.

ಮತದಾನದ ವೇಳೆ ಮತಗಟ್ಟೆಗಳಿಗೆ ಮೊಬೈಲ್ ಕೊಂಡಯ್ಯಲು ಅವಕಾಶವಿಲ್ಲ, ಮೊಬೈಲ್ ನಿಷೇಧಿಸಲಾಗಿದೆ. ಮತದಾರರು ಮತಗಟ್ಟೆ ಹೊರಗೆ ಮೊಬೈಲ್ ಇಟ್ಟು ತೆರಳಲು ಸೂಚಿಸಲಾಗಿದೆ.


Related Articles

Back to top button