Kannada NewsKarnataka NewsLatestPolitics

*ಪ್ರಜ್ವಲ್ ರೇವಣ್ಣ ಪರ ನಿಲ್ಲುವ ಪ್ರಶ್ನೆಯೇ ಇಲ್ಲ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಮಾಜಿ ಸಿಎಂ HDK*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Home add -Advt

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಪಕ್ಷದ ವತಿಯಿಂದಲೂ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಪ್ರಜ್ವಲ್ ಪರ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಣ್ದರು.

ಪ್ರಕರಡ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಎಸ್ ಐಟಿ ವರದಿ ಬರಲಿ ಬಳಿಕ ನೋಡೋಣ ಎಂದು ಹೇಳಿದರು. ಹಂಚಿಕೆಯಾಗಿರುವ ಪೆನ್ ಡ್ರೈವ್ ಗಳ ಹಿಂದೆ ಯಾರಿದ್ದಾರೆ? ಪೆನ್ ಡ್ರೈವ್ ಹಂಚಿಕೆ ಹಿಂದೆ ಕೆಲ ಎಕ್ಸ್ ಪರ್ಟ್ ಗಳು ಇದ್ದಾರೆ. ಅವರು ಯಾರು ಎಂಬುದು ತನಿಖೆಯಿಂದ ಹೊರಬರಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

Related Articles

Back to top button