ಪ್ರಗತಿವಾಹಿನಿ ಸುದ್ದಿ: ಬೆಲೆ ಎರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಜನಸಾಮಾನ್ಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.
ಸರ್ಕಾರಿ ತೈಲ ಕಂಪನಿಗಳು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಇಂದಿನಿಂದ ದೇಶದ ವಿವಿಧ ನಗರಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 19 ರೂ.ವರೆಗೆ ಇಳಿಕೆಯಾಗಿದೆ. ಆದಾಗ್ಯೂ, ಈ ಕಡಿತದ ಪ್ರಯೋಜನವು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಮೇಲೆ ಮಾತ್ರ ಲಭ್ಯವಿರುತ್ತದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಈ ಬಾರಿಯೂ ಯಾವುದೇ ಬದಲಾವಣೆಯಾಗಿಲ್ಲ.
ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ, ಪರಿಷ್ಕೃತ ದರ ಇಂದಿನಿಂದ ಜಾರಿ ಆಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,844.50 ರೂಪಾಯಿಗಳಿಂದ 1,825.50 ರೂಪಾಯಿಗೆ ತಗ್ಗಿದೆ. ಆದ್ರೆ ದೇಶೀಯ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಾಸವಾಗದೆ 805.50 ರೂಪಾಯಿಗಳಲ್ಲೇ ಉಳಿದಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ