*ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ; ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಭರ್ಜರಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಕೇಳಿಬಂದಿದೆ. ಅಲ್ಲದೇ ಹಲವು ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ದೇಶಾದ್ಯಾಂತ ಚರ್ಚೆಗೆ ಕಾರಣವಾಗಿದೆ.
ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೂ ಆಗಿರುವುದರಿಂದ ಅಲ್ಲದೇ ಪ್ರಧನೈ ನರೇಂದ್ರ ಮೋದಿ ಪ್ರಜ್ವಲ್ ಪರ ಮತಯಾಚಿಸಿರುವುದು ಇದೀಗ ದೇಶಾದ್ಯಂತ ಟೀಕೆಗೆ ಕಾರಣವಗಿದೆ. ಇದೇ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಗುಡುಗಿರುವ ರಾಹುಲ್ ಗಾಂಧಿ, ದೇಶದ ಪ್ರಧಾನಿ ಓರ್ವ ಮಾಸ್ ರೇಪಿಸ್ಟ್ ಅಭ್ಯರ್ಥಿಯ ಪರ ಮತಯಾಚನೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ ಎಂದು ಕಿಡಿಕಾರಿದ್ದಾರೆ.
ಪ್ರಜ್ವಲ್ ರೇವಣ್ನ ಪ್ರಕರಣ ದೇಶದ ಗಮನ ಸೆಳೆದಿದೆ. ನೂರಾರು ಮಹಿಳೆಯರ ಮೇಲೆ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಕೇವಲ ಅತ್ಯಾಚರವಲ್ಲ, ಸಾಮೂಹಿಕ ಅತ್ಯಾಚಾರ. ಪ್ರಜ್ವಲ್ ರೇವಣ್ಣ ಬಗ್ಗೆ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದಾಗ್ಯೂ ಎನ್ ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು. ಅಲ್ಲದೇ ಪ್ರಧಾನಿ ಮೋದಿ ಪ್ರಜ್ವಲ್ ಪರ ಚುನವಣಾ ಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮೋದಿ ಮತಯಾಚನೆ ಮಾಡಿರುವುದು ಇಡೀ ಜಗತ್ತೇ ನೋಡುತ್ತಿದೆ. ಪ್ರಜ್ವಲ್ ವಿರುದ್ಧ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವ ಆರೋಪವಿದೆ. ಅಂತಹ ರೇಪಿಸ್ಟ್ ಪರ ಪ್ರಧಾನಿಯೊಬ್ಬರು ಮತಯಾಚಿಸಿರುವುದು ದುರಂತ. ಇದಕ್ಕೆ ಪ್ರಧಾನಿ ಮೊದಿ, ಬಿಜೆಪಿ, ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ