Kannada NewsKarnataka NewsLatestPolitics

*ಪ್ರಜ್ವಲ್ ರೇವಣ್ಣಗೆ ಎದುರಾಯ್ತು ಮತ್ತೊಂದು ಸಂಕಷ್ಟ: ರೇಪ್ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು ದಾಖಲಿಸಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಮುಂದೆ ನಿನ್ನೆ ಮತ್ತೋರ್ವ ಸಂತ್ರಸ್ತೆ ಹಾಜರಾಗಿದ್ದು, ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿರುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ರೇಪ್ ಕೇಸ್ ದಾಖಲಿಸಿದೆ. ಐಪಿಸಿ ಸೆಕ್ಷನ್ 376 (2)(N) ಅಡಿ ಎಸ್ ಐಟಿ ಯಿಂದ ಪ್ರಕರಣ ದಾಖಲಾಗಿದೆ.

ಸಿಆರ್ ಪಿಸಿ 164 ಅಡಿ ಸಂತ್ರಸ್ತೆ ಹೇಳಿಕೆ ಪಡೆಯಲಾಗಿದ್ದು, ಸಂತ್ರಸ್ತೆ ಸುದೀರ್ಘ 2 ಗಂಟೆಗಳ ಕಾಲ ತನ್ನ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ದೇಶಕ್ಕೆ ಮರಳುತ್ತಿದ್ದಂತೆ ಬಂಧಿಸುವ ಸಾಧ್ಯತೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button