LatestPolitics

*ಭವಾನಿ ರೇವಣ್ಣಗೆ ನೋಟಿಸ್ ನೀಡಿದ ಎಸ್ಐಟಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ನೋಟಿಸ್‌ ನೀಡಿದೆ ಎಂದು ತಿಳಿದು ಬಂದಿದೆ.‌

Home add -Advt

ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಇಂದು ಸ್ಥಳೀಯ ಪೊಲೀಸರು ಹೊಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಮನೆಗೆ ನೋಟಿಸ್‌ ನೀಡಿ ಹೋಗಿದ್ದಾರೆ ಎನ್ನಲಾಗಿದೆ, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್‌ ಶಾಸಕ ಎಚ್ ಡಿ ರೇವಣ್ಣಗೆ ಎಸ್‌ಐಟಿ ವಿಚಾರಣೆಗೆ ಎರಡು ಬಾರಿ ನೋಟಿಸ್‌ ನೀಡಿದೆ. ಆದರೂ ಕೂಡ ಇಬ್ಬರೂ ಇದುವರೆಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗಿಲ್ಲ.

Related Articles

Back to top button