ಪ್ರಿಯಾಂಕಾ ಜಾರಕಿಹೊಳಿ ಗೆಲವು ನಿಶ್ಚಿತ: ಪ್ರಕಾಶ ಹುಕ್ಕೇರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 5 ಜನ ಕಾಂಗ್ರೆಸ್ ನ ಶಾಸಕರು ಇರುವುದರಿಂದ ನಮ್ಮ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲವು ನಿಶ್ಚಿತ ಎಂದು ವಿಧಾನಪರಿಷತ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.
ಚಿಕ್ಕೋಡಿ ತಾಲೂಕಿನ ವಾಳಕಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪ್ರಚಾರಾರ್ಥವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಸಿ ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಚುನಾವಣೆಯ ಪೂರ್ವದಲ್ಲಿ 5 ಗ್ಯಾರಂಟಿ ಭರವಸೆ ಕೊಟ್ಟಂತೆ ಸರ್ಕಾರ ಅಧಿಕಾರಕ್ಕೆ ಬಂದಾಗ ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿಗಳು ಜನರಿಗೆ ಸಾಕಷ್ಟು ಅನುಕೂಲವಾಗಿವೆ. ಈ ಕಾರಣಕ್ಕಾಗಿ ಎಲ್ಲರೂ ತಪ್ಪದೇ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸಿ ತರೋಣಾ ಎಂದರು. ಹಾಗೂ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯ ಕಾಮಗಾರಿ ಟೆಂಡರ್ ಆಗಿದ್ದು, ಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಹಾದೇವ ಪಾಟೀಲ, ಖಂಡೆರಾವ ಪಾಟೀಲ, ಧನಾಜಿ ಪಾಟೀಲ, ಸುಕುಮಾರ ಗೋಮಾಯಿ, ಬಾಲಕೃಷ್ಣ ಪಾಟೀಲ, ಸುಜಯ ಪಾಟೀಲ, ಮಹಾದೇವ ಕೌಲಾಪೂರೆ, ರಾಹುಲ ಡೊಣೆ, ಸಿದ್ದಲಿಂಗ ಚಿಗರೆ, ಕೃಷ್ಣಾ ಘಸ್ತೆ, ಅಣ್ಣಾಸಾಹೇಬ ನಾಯಿಕ, ಬಬನ ನಾಯಕ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ