Kannada NewsKarnataka News

20 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ ಸಾರಿಗೆ ಬಸ್ ಅಪಘಾತ

ಪ್ರಗತಿವಾಹಿನಿ ಸುದ್ದಿ : ನಿಯಂತ್ರಣ ತಪ್ಪಿ 20 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ ಸಾರಿಗೆ ಬಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಅಪಘಾತಕ್ಕೀಡಾಗಿದೆ. ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅರ್ಧಕ್ಕೆ ನಿಂತಿದ್ದ ರಸ್ತೆ ಕಾಣದೆ ಚಾಲಕ ಬಸ್ ಚಲಾಯಿಸಿದ್ದಾರೆ. ಪರಿಣಾಮ ಹಾಳಾಗಿರುವ ರಸ್ತೆ ಇಳಿಯುತ್ತಿದ್ದಂತೆ ಬಸ್ ಪಲ್ಟಿಯಾಗಿದೆ.

Home add -Advt

ಈ ವೇಳೆ ಬಸ್‌ನಲ್ಲಿ 20ಕ್ಕೂ ಅಧಿಕ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, 8 ಜನರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತರೀಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಳಪೆ ರಸ್ತೆಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Related Articles

Back to top button