Election News

*ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆ ಮೇ 7ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Home add -Advt

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ದೇಶದಲ್ಲಿ 3ನೇ ಹಂತದ ಹಾಗೂ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ?

ಬಾಗಲಕೋಟೆ
ಬೆಳಗಾವಿ
ಬಳ್ಳಾರಿ
ಬೀದರ್
ವಿಜಯಪುರ
ಚಿಕ್ಕೋಡಿ
ದಾವಣಗೆರೆ
ಧಾರವಾಡ
ಹಾವೇರಿ
ಕೊಪ್ಪಳ
ಗುಲ್ಬರ್ಗ
ರಾಯಚೂರು
ಶಿವಮೊಗ್ಗ
ಉತ್ತರ ಕನ್ನಡ
ಈ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ನಾಳೆ ಒಟ್ಟು 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಈ ಹಂತದಲ್ಲಿ 1300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದು ಸುಮಾರು 120 ಮಹಿಳಾ ಅಭ್ಯರ್ಥಿಗಳಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button