Kannada NewsKarnataka News

*ಮಂಗನ ಕಾಯಿಲೆಗೆ ಮಗು ಬಲಿ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಮತ್ತೆ ಹೆಚ್ಚಾಗಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ.

ಈ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಒಂಬತ್ತು ಜನ ಮೃತಪಟ್ಟಿದ್ದಾರೆ. ಕೆಲವು ದಿನದಿಂದ ಜ್ವರದಿಂದ ನರಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೆಣ್ಣುಮಗು ಅಸುನೀಗಿದೆ. ಸಿದ್ದಾಪುರ ತಾಲೂಕಿನೊಂದರಲ್ಲೇ 90 ಮಂಗನಕಾಯಿಲೆ ಪ್ರಕರಣ ಪತ್ತೆಯಾದರೇ ಇತರೆ ತಾಲೂಕುಗಳು ಸೇರಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ. 

Home add -Advt

Related Articles

Back to top button