ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹೆಚ್.ಡಿ.ರೇವಣ್ಣ ಪರ ವಕೀಲರು ರೇವಣ್ಣಗೆ ಜಾಮೀನು ನೀಡುವಂತೆ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕೆ.ಆರ್.ನಗರದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ಮೇ 4ರಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು.
ಕಿಡ್ನ್ಯಾಪ್ ಕೇಸ್ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿದ್ದ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದರು. ರೇವಣ್ಣ ಬಂಧನದ ಬಳಿಕ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಮುಕ್ತಾಯಗೊಳಿಸಿತ್ತು. ಇದೀಗ ಎಸ್ಐಟಿ ಕಸ್ಟಡಿಯಲ್ಲಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ